ಕಾರಂತರ ಸಾಧನೆಯೇ ನಮಗೆ ಸ್ಫೂರ್ತಿ, ಉಪನ್ಯಾಸಕಿ ಮಹಾಲಕ್ಷ್ಮಿ ಸೋಮಯಾಜಿ ಹೇಳಿಕೆ

karanth
Published on

ಕೋಟ: ಒಬ್ಬ ಮನುಷ್ಯ ಹೇಗೆ ಬದುಕಬೇಕು, ಹೇಗೆ ಸಾಧನೆಯ ಶಿಖರವನ್ನು ಏರಿ ತನ್ನ ಕಾಲದ ನಂತರವೂ ತಮ್ಮ ಹೆಜ್ಜೆ ಗುರುತು ಶಾಶ್ವತವಾಗಿಡಲು ಬದುಕನ್ನು ರೂಪಿಸಿಕೊಳ್ಳಬೇಕು ಎಂಬುದಕ್ಕೆ ಕಾರಂತರೇ ಉದಾಹರಣೆ. ಅವರ ಸಾಧನೆಯೇ ನಮಗೆಲ್ಲಾ ಸ್ಫೂರ್ತಿ ಎಂದು ಉಪನ್ಯಾಸಕಿ ಮಹಾಲಕ್ಷ್ಮಿ ಸೋಮಯಾಜಿ ಹೇಳಿದರು.

ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಕಾರಂತ ಟ್ರಸ್ಟ್ ಉಡುಪಿ, ಯು-ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ.ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಕ-ಸಾಂಸ್ಕೃತಿಕ ಸುಗ್ಗಿ ಆಲ್ಮೋರ-2020 (ಮರೆಯಲಾಗದ ಶಬ್ಧತೀರ) ಕಾರ್ಯಕ್ರಮದಲ್ಲಿ ಒಂಬತ್ತನೇ ದಿನದ ಕಾರ್ಯಕ್ರಮದಲ್ಲಿ ಕಾರಂತ ಚಿಂತನದಲ್ಲಿ ಮಾತನಾಡುತ್ತಿದ್ದರು.

ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು. ಕೋಟತಟ್ಟು ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕಿ ಶೈಲಜಾ ಕೆ.ಎನ್. ವಂದಿಸಿದರು. ಕಾರಂತ ಚಿಂತನ ಕಾರ್ಯಕ್ರಮದ ಬಳಿಕ ನೃತ್ಯ ನಿಕೇತನ ಕೊಡವೂರು ಅವರಿಂದ ನೃತ್ಯ ಚಿತ್ತಾರ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net