ಕಾರಂತರ ಸಾಹಿತ್ಯ ಸಾಧನೆ ಎಲ್ಲರಿಗೂ ಮಾದರಿ

kota (2)
Published on

ಕೋಟ: ಕೋಟತಟ್ಟು ಗ್ರಾಪಂ ಹಾಗೂ ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಆಶ್ರಯದಲ್ಲಿ ಶುಕ್ರವಾರ ಕಾರಂತ ಥೀಮ್ ಪಾರ್ಕಿನಲ್ಲಿ ಡಾ.ಶಿವರಾಮ ಕಾರಂತರ 123ನೇ ಜನ್ಮದಿನೋತ್ಸವ ಆಚರಿಸಲಾಯಿತು.

ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ.ಕುಂದರ್ ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಕಾರಂತರ ಜೀವನಾಸಕ್ತಿಯನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅಗತ್ಯತೆ ಇದೆ. ಅವರ ಕೊಡುಗೆ, ಸಾಮಾಜಿಕ ಕಳಕಳಿ, ಸಾಹಿತ್ಯದ ಸಾಧನೆ ನಮಗೆಲ್ಲರಿಗೂ ಮಾದರಿ ಎಂದರು.

ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್ ಬಾರಿಕೆರೆ, ಪಿಡಿಒ ಸುಧಾಕರ ಶೆಟ್ಟಿ, ಉಪಾಧ್ಯಕ್ಷೆ ಸರಸ್ವತಿ, ಪಂಚಾಯಿತಿ ಸದಸ್ಯರು ಹಾಗೂ ಪ್ರತಿಷ್ಠಾನ ಸದಸ್ಯರು ಉಪಸ್ಥಿತರಿದ್ದರು. ಪ್ರತಿಷ್ಠಾನ ಕಾರ್ಯದರ್ಶಿ ನರೇಂದ್ರಕುಮಾರ್ ಕೋಟ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಶಸ್ತಿ ಪ್ರದಾನ ಮುಂದೂಡಿಕೆ

ಈ ಬಾರಿ ನಡೆಯಬೇಕಿದ್ದ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಪಂಚಾಯಿತಿ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net