ಪಕ್ಷ ನಿಷ್ಠರಿಗೆ ಸೂಕ್ತ ಸ್ಥಾನಮಾನ ಲಭ್ಯ

a grand welcome
ಕಾರಟಗಿ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು ಅವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಿದರು.
Published on

ಕಾರಟಗಿ: ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಇದೀಗ ನನ್ನ ಸೇವೆ ಗುರುತಿಸಿ ಜಿಲ್ಲಾಧ್ಯಕ್ಷ ಸ್ಥಾನ ನೀಡಿದೆ ಎಂದು ಮಾಜಿ ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಜಿಲ್ಲಾಧ್ಯಕ್ಷರಾದ ಬಳಿಕ ಪಟ್ಟಣಕ್ಕೆ ಆಗಮಿಸಿದ ಅವರು, ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ಹಾಗೂ ಸನ್ಮಾನ ಸ್ವೀಕರಿಸಿ ಗುರುವಾರ ಮಾತನಾಡಿದರು.

ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ನನಗೆ ಪ್ರಾತಿನಿಧ್ಯ ನೀಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಿಲ್ಲೆಯ ನಾಯಕರು ನನ್ನ ಮೇಲೆ ಗೌರವ, ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಇದನ್ನು ನಾನು ಉಳಿಸಿಕೊಂಡು ಹೋಗುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಾಖಲಿಸಲು ಶ್ರಮಿಸಲಾಗುವುದು. ಅಲ್ಲದೆ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಪುಟಿದೇಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಂತರ ಕಾರ್ಯಕರ್ತರು ಪಟ್ಟಣದ ಕನಕದಾಸ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪಕ್ಷದ ಮುಖಂಡರಾದ ಕಾಶಿ ವಿಶ್ವನಾಥ, ಬಸವರಾಜ, ಹುಲುಗಪ್ಪ, ರಮೇಶ್ ಸೇರಿ ವಿವಿಧ ಘಟಕದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net