ಡಿಕೆಶಿ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ

Untitled design (6)
Published on

ಕಾರಟಗಿ: ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ನಡೆಯನ್ನು ಖಂಡಿಸಿ ಬಿಜೆಪಿ ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಕನಕದಾಸ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನವನ್ನೇ ಬದಲಾಯಿಸುವ ಕುರಿತು ಮಾತನಾಡಿರುವ ಡಿ.ಕೆ.ಶಿವಕುಮಾರ ಅವರು ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ. ಇದರಲ್ಲಿ ಸಮಾಜದಲ್ಲಿ ಜಾತಿ, ಮತ, ಪಂಥದ ನಡುವೆ ವೈಮನಸ್ಸು ಹುಟ್ಟು ಹಾಕುವ ಉದ್ದೇಶ ಅಡಗಿದೆ. ಕಾಂಗ್ರೆಸ್ ಅಸಲಿ ನೀತಿಯನ್ನು ಡಿಕೆಶಿ ಹೇಳಿಕೆ ಮೂಲಕ ಹೂರಹಾಕಿಸಿದೆ. ಮುಸ್ಲಿಂಗೆ ಗುತ್ತಿಗೆಯಲ್ಲಿ ಮೀಸಲಾತಿ ಜಾರಿ ಸಂಬಂಧದ ಮಸೂದೆಯನ್ನು ವಿರೋಧಿಸಿದ ಕಾರಣಕ್ಕೆ ವಿಧಾನಸಬೆಯಲ್ಲಿ 18 ಜನ ಬಿಜೆಪಿ ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಲಾಗಿದೆ. ಸರ್ಕಾರ ತನ್ನ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಕೂಡಲೇ ಡಿಕೆಶಿ ಶೀಘ್ರವೇ ರಾಜ್ಯದ ಜನರಿಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net