

ಕಾರಟಗಿ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ನಾನಾ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಪಟ್ಟಣದ ಸಚಿವರ ಕಚೇರಿಯಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಎಸ್‌ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳಿಗೆ ಸೋಮವಾರ ಉಚಿತ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿದರು. ನಾಗನಕಲ್ ಬಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರಥಮ ವರ್ಷಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರ್ಕಾರದಿಂದ ಲ್ಯಾಪ್ ಟಾಪ್ ವಿತರಿಸಲಾಗುತ್ತಿದೆ. ವಿಷಯಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಹಾಗೂ ಇತರ ಶಿಕ್ಷಣ ವಿಷಯಗಳಿಗರ ಬಳಕೆ ಮಾಡಿ. ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಕಾಲೇಜು ಗಳು ಕಡಿಮೆಯಿಲ್ಲ. ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ, ಕಲಿತ ಕಾಲೇಜು ಹಾಗೂ ಪಾಲಕರ ಕೀರ್ತಿ ಹೆಚ್ಚಿಸಲು ಶ್ರಮಿಸಿ ಎಂದು ಕಿವಿಮಾತು ಹೇಳಿದರು.
ಕಾಲೇಜು ಪ್ರಾಚಾರ್ಯ ಶಂಕ್ರಪ್ಪ, ಸಿಬ್ಬಂದಿ ಆನಂದ್ ಕೊಪ್ಪಳದ, ಎಚ್. ಶೃತಿ, ಎಚ್. ಮಧುಕೇಶ್, ಅಂಬಿಕಾ, ಮಂಜುನಾಥ ಹಿರೇಮಠ ಇತರರಿದ್ದರು.