ಕಲ್ಯಾಣ ಕರ್ನಾಟಕ ಉತ್ಸವ ದಿನ ಸರಳ ಆಚರಣೆ

090920 Karatagi TP Meeting
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ನಿಮಿತ್ತ ಕಾರಟಗಿಯಲ್ಲಿ ತಹಸೀಲ್ದಾರ್ ಕವಿತಾ ಆರ್. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.
Published on

ಕಾರಟಗಿ: ಕರೊನಾ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಕವಿತಾ ಆರ್. ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಪಟ್ಟಣದ ಸಿದ್ಧೇಶ್ವರ ರಂಗಮಂದಿರದಲ್ಲಿ ಸೆ.17 ರಂದು ಉತ್ಸವ ಆಚರಿಸಲಾಗುವುದು. ಕರೊನಾ ಇರುವುದರಿಂದ ಹೆಚ್ಚಿನ ಜನ ಸೇರದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ಮಕ್ಕಳು ಹಾಗೂ ವೃದ್ಧರು ಕಾರ್ಯಕ್ರಮಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಹ್ಯಾಂಡ್ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳ ವ್ಯವಸ್ಥೆ ಮಾಡಬೇಕು. ಪುರಸಭೆ ಮುಖ್ಯಾಧಿಕಾರಿಗಳು ಮಂದಿರದ ಆವರಣದಲ್ಲಿ ಸ್ವಚ್ಛತೆ ಬಗ್ಗೆ ಗಮನ ನೀಡಬೇಕು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ವಿವಿಧ ಇಲಾಖೆ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಪ್ರತಿಯೊಬ್ಬರೂ ತಪ್ಪದೆ ನಿರ್ವಹಿಸಬೇಕು ಎಂದು ಸೂಚಿಸಿದರು.

ಪುರಸಭೆ ಮುಖ್ಯಾಧಿಕಾರಿ ಎನ್.ಶಿವಲಿಂಗಪ್ಪ, ಕಂದಾಯ ಅಧಿಕಾರಿ ಸುರೇಶ್, ನೋಂದಣಿ ಅಧಿಕಾರಿ ಸಂತೋಷ, ಅಗ್ನಿಶಾಮಕ ಠಾಣಾಧಿಕಾರಿ ಉರಕುಂದಪ್ಪ, ಮುಖಂಡರಾದ ಪ್ರಹ್ಲಾದ್ ಜೋಷಿ, ತಾಯಪ್ಪ, ರಾಮರಾವ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net