ಕಸಾಪಕ್ಕೆ ಹೆಚ್ಚಿನ ಅನುದಾನ ಮೀಸಲಿಡಿ

appeal
ಕಾರಟಗಿಯಲ್ಲಿ ಸಚಿವ ಶಿವರಾಜ ತಂಗಡಗಿಗೆ ಕಸಾಪ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಹೇರೂರು, ಕಸಾಪ ತಾಲೂಕಾಧ್ಯಕ್ಷರಾದ ಶರಣಪ್ಪ ಕೋಟ್ಯಾಳ, ಮಹಿಬೂಬ್ ಹುಸೇನ, ರುದ್ರೇಶ ಆರಾಳ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹೇಶ್ ಸಿಂಗನಾಳ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ನಾಯಕ ಇತರರಿದ್ದರು.
Published on

ಕಾರಟಗಿ: ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ಗೆ ವಾರ್ಷಿಕ 35 ಕೋಟಿ ರೂ. ಅನುದಾನ ಮೀಸಲಿಡಲು ಒತ್ತಾಯಿಸಿ ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಹೇರೂರು ನೇತೃತ್ವದಲ್ಲಿ ಪದಾಧಿಕಾರಿಗಳು ಪಟ್ಟಣದಲ್ಲಿ ಸಚಿವ ಶಿವರಾಜ ತಂಗಡಗಿಗೆ ಗುರುವಾರ ಮನವಿ ಸಲ್ಲಿಸಿದರು.

ಸರ್ಕಾರ 2017-18ರಲ್ಲಿ 12 ಕೋಟಿ ರೂ. ಅನುದಾನ ನೀಡಿದೆ. ಆದರೆ, ಈಗ ವಿವಿಧ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಹೀಗಾಗಿ ಬೆಲೆ ಏರಿಕೆ ಪರಿಗಣಿಸಿ ಹೆಚ್ಚುವರಿ ಅನುದಾನ ನೀಡಬೇಕು. ಜಿಲ್ಲಾಮಟ್ಟ ಮಾತ್ರವಲ್ಲದೇ ಇಂದಿನ ದಿನಗಳಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲೂ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿವೆ. ಪರಿಷತ್‌ನ ನಿರ್ವಹಣೆ, ಪುಸ್ತಕ ಪ್ರಕಟಣೆ, ವಿಚಾರ ಸಂಕೀರ್ಣ, ಕಾರ್ಯಾಗಾರಗಳು, ಸ್ಥಗಿತಗೊಂಡಿರುವ ನಿಘಂಟು ಯೋಜನೆ ಮುಂದುವರಿಕೆ ಸೇರಿ ಕಾರ್ಯಚಟುವಟಿಕೆಗಳಿಗೆ 35 ಕೋಟಿ ರೂ. ಅನುದಾನದ ಅಗತ್ಯವಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಸಾಪ ಕನಕಗಿರಿ ವಿಧಾನಸಭಾ ಘಟಕದ ಮಾಜಿ ಅಧ್ಯಕ್ಷ ಬಸವರಾಜ್ ರ‌್ಯಾವಳದ, ನಿಕಟಪೂರ್ವ ಅಧ್ಯಕ್ಷ ಚನ್ನಬಸಪ್ಪ ವಕ್ಕಳದ, ಪದಾಧಿಕಾರಿಗಳಾದ ಮಂಜುನಾಥ್ ಚಿಕೇನಕೊಪ್ಪ, ಮಾರೇಶ್ ವಿಭೂತಿ, ರಮೇಶ ಮಾವಿನಮಾಡಗು, ತಿಮ್ಮಣ್ಣ ನಾಯಕ, ಮಲ್ಲಿಕಾರ್ಜುನ ಯತ್ನಟ್ಟಿ, ಭೀಮಣ್ಣ ಕರಡಿ, ಗಂಗಾವತಿಯ ಶರಣಪ್ಪ ಮಟ್ಟಿ, ಕನಕಗಿರಿಯ ಕನಕರೆಡ್ಡಿ, ರಮೇಶ ರೆಡ್ಡಿ, ಮಹಮ್ಮದ್ ಶರೀಫ್, ಚಾಂದಪಾಷಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net