ಬೇರೆಭಾಷೆ ಗೌರವಿಸಿ, ಕನ್ನಡವನ್ನು ಪ್ರೀತಿಸಿ

SANMANA
ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎ.ಜಿ. ಕಾರಟಗಿ ಅವರನ್ನು ಕಾರಟಗಿ ತಾಲೂಕಾಡಳಿತದಿಂದ ಸೋಮವಾರ ಸನ್ಮಾನಿಸಲಾಯಿತು. ತಹಸೀಲ್ದಾರ್ ಎಂ. ಕುಮಾರಸ್ವಾಮಿ, ಶಿರಸ್ತೇದಾರ್ ವಿಶ್ವೇಶ್ವರಯ್ಯ ಸಾಲಿಮಠ, ಕಂದಾಯ ನಿರೀಕ್ಷಕಿ ಸಂಗಮ್ಮ ಹಿರೇಮಠ ಇದ್ದರು.
Published on

ಕಾರಟಗಿ: ನಾಡು-ನುಡಿ, ನೆಲ-ಜಲದ ರಕ್ಷಣೆ ವಿಚಾರದಲ್ಲಿ ಕನ್ನಡಿಗರು ಒಗ್ಗಟ್ಟಾಗಿರಬೇಕು ಎಂದು ತಹಸೀಲ್ದಾರ್ ಎಂ.ಕುಮಾರಸ್ವಾಮಿ ಹೇಳಿದರು.

ಪಟ್ಟಣದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎ.ಜಿ.ಕಾರಟಗಿ ಅವರನ್ನು ಸೋಮವಾರ ಸನ್ಮಾನಿಸಿ ಮಾತನಾಡಿದರು. ಬೇರೆ ಭಾಷೆಗಳನ್ನು ಗೌರವಿಸಿ ಆದರೆ, ಮಾತೃ ಭಾಷೆಯನ್ನು ಹೆಚ್ಚಾಗಿ ಪ್ರೀತಿಸಬೇಕು. ಸರ್ಕಾರ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಿದೆ.

ಈ ಮೂಲಕ ಅವರ ಜವಾಬ್ದಾರಿ ಹೆಚ್ಚಿಸಿದೆ. ಅದರಲ್ಲೂ ತಾಲೂಕಿನಲ್ಲಿ ಎ.ಜಿ.ಕಾರಟಗಿ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಖುಷಿಯ ವಿಚಾರ ಎಂದರು. ಶಿರಸ್ತೇದಾರ್ ವಿಶ್ವೇಶ್ವರಯ್ಯ ಸಾಲಿಮಠ, ಕಂದಾಯ ನಿರೀಕ್ಷಕಿ ಸಂಗಮ್ಮ ಹಿರೇಮಠ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net