ಕರಿವೀರೇಶ್ವರ ತಾತನ ಜಾತ್ರೆ ಜೋರು

Jatra Mahotsav
ಕಾರಟಗಿ ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಕರಿವೀರೇಶ್ವರ ತಾತನವರ 43ನೇ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು.
Published on

ಕಾರಟಗಿ: ಮಹಾ ಶಿವರಾತ್ರಿ ನಿಮಿತ್ತ ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಕರಿವೀರೇಶ್ವರ ತಾತನವರ 43ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಬುಧವಾರ ಸಂಭ್ರಮದಿಂದ ನಡೆಯಿತು.

ಬೆಳಗ್ಗೆ ದೇವಸ್ಥಾನದಲ್ಲಿ ವೀರಭದ್ರಯ್ಯಸ್ವಾಮಿ ನೇತೃತ್ವದಲ್ಲಿ ಶ್ರೀ ಕರಿವೀರೇಶ್ವರ ಮೂರ್ತಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಸೇರಿ ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಕುಂಭ, ಕಳಸ-ಕನ್ನಡಿ ಹೊತ್ತ ಮಹಿಳೆಯರು, ವಾದ್ಯಮೇಳದೊಂದಿಗೆ ಗಂಗೆ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು.

ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಕರಿವೀರೇಶ್ವರ ದೇವರ ಭಾವಚಿತ್ರ ಮೆರವಣಿಗೆ ನಡೆಯಿತು. ಸಾಂಸ್ಕೃತಿಕ ಸೋಗಡಿನ ಡೊಳ್ಳು ಕುಣಿತ, ವೀರಗಾಸೆ, ಒಡಪುಗಳು ಹಾಗೂ ನೃತ್ಯ ನೊಡುಗರ ಗಮನ ಸೆಳೆದವು. ಬಳಿಕ ದೇವಸ್ಥಾನದಲ್ಲಿ ನೆರವೇರಿದ ಸಾಮೂಹಿಕ ವಿವಾಹದಲ್ಲಿ ಎರಡು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದವು. ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಕುಂಟೋಜಿ, ಬರಗೂರು, ಜಮಾಪುರ, ಕೊಟ್ನೇಕಲ್ ಇತರ ಗ್ರಾಮಸ್ಥರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net