

ಕಾರಟಗಿ: ಪುರಸಭೆಯಿಂದ ಕೆಪಿಎಸ್ ಶಾಲೆವರೆಗೆ ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಭಾವಚಿತ್ರ ಮರೆವಣಿಗೆ ನಡೆಯಲಿದೆ ಎಂದು ತಹಸೀಲ್ದಾರ್ ಎಂ.ಕುಮಾರಸ್ವಾಮಿ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.
ಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಬೇಕು. ವಿವಿಧ ಇಲಾಖೆಗಳಿಗೆ ನೀಡಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿಭಾಯಿಸಬೇಕು. ಮುಖ್ಯಶಿಕ್ಷಕರು, ಶಿಕ್ಷಕರು, ಅಂಗನವಾಡಿ ಮೇಲ್ವಿಚಾರಕರು, ಸಾರ್ವಜನಿಕರು ಹಾಗೂ ಸಂಘಟನೆಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ತಾಪಂ ಇಒ ಲಕ್ಷ್ಮೀದೇವಿ, ಸಿಪಿಐ ಸುಧೀರ್ ಬೆಂಕಿ, ಪುರಸಭೆ ಮುಖ್ಯಾಧಿಕಾರಿ ಸುರೇಶ್ ಶೆಟ್ಟರ್, ಮುಖಂಡ ಮರಿಯಪ್ಪ ಸಾಲೋಣಿ ಇತರರಿದ್ದರು.