ಸ್ತ್ರೀಯರ ಸಬಲೀಕರಣಕ್ಕೆ ಮೋದಿ ಆದ್ಯತೆ: ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಲೀಲಾ ಹೇಳಿಕೆ

1 KARATAGI 1
Published on

ಕಾರಟಗಿ: ತುಮಕೂರಲ್ಲಿ ಜ.21ರಂದು ನಡೆಯುವ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನಲೆಯಲ್ಲಿ ಮಂಡಲ ಮೋರ್ಚಾದಿಂದ ಭಾನುವಾರ ಬೈಕ್ ರ‌್ಯಾಲಿ ನಡೆಸಲಾಯಿತು.

ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಲೀಲಾ ಅಯೋಧ್ಯೆ ಮಾತನಾಡಿ, ರಾಷ್ಟ್ರೀಯ ಮಹಿಳಾ ಸಮಾವೇಶದಲ್ಲಿ ವಿಧಾನಸಭೆ, ಲೋಕಸಭೆ ಚುನಾವಣೆ ಹಾಗೂ ಮಹಿಳೆಯರ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯಲಿವೆ. ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡಿದ್ದಾರೆ. ಮಹಿಳೆಯರಿಗಾಗಿ ರೂಪಿಸುತ್ತಿರುವ ನೀತಿಗಳು ಮತ್ತು ಕಾರ್ಯಕ್ರಮಗಳ ವಿಸ್ತೃತ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ವನಾರ್ತಿ ಶ್ರೀನಿವಾಸನ್ ಇತರರು ಭಾಗವಹಿಸಲಿದ್ದು, ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದರು.

ಪುರಸಭೆ ಸದಸ್ಯೆ ಪಾರ್ವತಿ ಗುರಿಕಾರ್, ಮಹಿಳಾ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಕುಮಾರಿ, ಜಿಲ್ಲಾ ಕಾರ್ಯದರ್ಶಿ ಶಾಂತಾ ಪವಾರ್, ಮಂಡಲದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಸ್ಕಿ, ಪ್ರಮುಖರಾದ ಆನಂದ ಕುಲಕರ್ಣಿ, ಅಮರೇಶ ಪಾಟೀಲ್, ಮಂಜುನಾಥ ನಾಯಕ, ಯಮನೂರಪ್ಪ, ಹನುಮಂತ, ಎಸ್.ಯರಡೋಣಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net