ಜನರಿಗೆ ಸಮಸ್ಯೆಯಾಗದ ರೀತಿ ಕ್ವಾರಂಟೈನ್ - ತಹಸೀಲ್ದಾರ್ ಕವಿತಾ ಆರ್.

050620 Jamapura Quarantine Tahasildar Kavita Visit
Published on

ಕಾರಟಗಿ: ಹೊರ ರಾಜ್ಯದಿಂದ ತಾಲೂಕಿಗೆ ಆಗಮಿಸಿರುವ ಜನರಿಗೆ ಯಾವುದೇ ಸಮಸ್ಯೆಯಾಗದ ರೀತಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಹಸೀಲ್ದಾರ್ ಕವಿತಾ ಆರ್. ಹೇಳಿದರು.

ತಾಲೂಕಿನ ಜಮಾಪುರದ ಕ್ವಾರಂಟೈನ್ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾತನಾಡಿದರು. ತಾಲೂಕಿನಲ್ಲಿ ಕರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ. ಸಾರ್ವಜನಿಕರು ಕೂಡ ರೋಗದ ಬಗ್ಗೆ ಕಾಳಜಿವಹಿಸಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ವಿವಿಧ ಕೇಂದ್ರಗಳಲ್ಲಿ ಕ್ವಾರಂಟೈನ್ ಮಾಡಲಾದ ಜನರಿಗೆ ರೋಗದ ಲಕ್ಷಣಗಳು ಕಾಣಿಸಿಕೊಳ್ಳದ ಕಾರಣ ಅನೇಕರನ್ನು ಬಿಡುಗಡೆ ಮಾಡಲಾಗಿದೆ. ಪುಣೆಯಿಂದ ಆಗಮಿಸಿ 12 ಜನರನ್ನು ಜಮಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ವಸ್ತುಸ್ಥಿತಿ ತಿಳಿದುಕೊಳ್ಳಲು ಭೇಟಿ ನೀಡಲಾಗಿದೆ. ಜನರಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದರು. ಕಂದಾಯ ಇಲಾಖೆ ಅಧಿಕಾರಿಗಳು ಸೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net