ಸ್ವಯಂ ಪ್ರೇರಿತವಾಗಿ ಅಂಗಡಿ ಬಂದ್ ಮಾಡಿದ ಮಾಲೀಕರು

090720 Corona Effect Self Shop Close
ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಾರಟಗಿ ತಾಲೂಕಿನ ಯರಡೋಣ ಗ್ರಾಮದಲ್ಲಿ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ವಿರುವುದು.
Published on

ಕಾರಟಗಿ: ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ಕರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂಗಡಿಗಳ ಮಾಲೀಕರು ಮಧ್ಯಾಹ್ನ 2.30ರ ಬಳಿಕ ಸ್ವಯಂ ಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ರೋಗ ನಿಯಂತ್ರಣಕ್ಕೆ ತಾಲೂಕಾಡಳಿತಕ್ಕೆ ಸಾಥ್ ನೀಡುತ್ತಿದ್ದಾರೆ.

ಕರೊನಾ ನಿಯಂತ್ರಣಕ್ಕೆ ಸರ್ಕಾರ ಶತ ಪ್ರಯತ್ನ ಮಾಡುತ್ತಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಪಟ್ಟಣ ಸೇರಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಕರೊನಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ರೋಗದ ಬಗ್ಗೆ ಜಾಗೃತಿ ಮೂಡಿಸಿದರೂ ಬಹುತೇಕರು ನೀತಿ-ನಿಯಮಗಳನ್ನು ಪಾಲಿಸುತ್ತಿಲ್ಲ. ಅಲ್ಲದೇ, ತಹಸಿಲ್, ನೋಂದಣಿ ಕಚೇರಿಗಳಲ್ಲಿ ಜನರು ಪರಸ್ಪರ ಅಂತರ ಕಾಯ್ದುಕೊಳ್ಳುತ್ತಿಲ್ಲ. ವೈರಸ್ ನಿಯಂತ್ರಣಕ್ಕೆ ಕೆಲ ಗಂಟೆಗಳಿಗೊಮ್ಮೆ ಸ್ಯಾನಿಟೈಸರ್ ಬಳಸಿ ಹ್ಯಾಂಡ್ ವಾಶ್ ಮಾಡಿಕೊಳ್ಳುವುದು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳುವುದೆ ಪರಿಹಾರ ಎಂದು ಅರಿತಿರುವ ಕೆಲವರು ಸ್ವಯಂ ಲಾಕ್ ಡೌನ್ ಮಾಡಲು ಈಗಾಗಲೇ ಕೊಪ್ಪಳ, ಗಂಗಾವತಿ ತಾಲೂಕಿನ ಜನರು ನಿರ್ಧರಿಸಿದ್ದಾರೆ.

ಬೆಳಗ್ಗೆ 6 ಗಂಟೆಗೆ ತೆರೆದ ಕಿರಾಣಿ ಅಂಗಡಿ, ಹೋಟೆಲ್, ಬೇಕರಿ, ತರಕಾರಿ ಅಂಗಡಿ, ಸ್ಟೇಷನರಿ ಶಾಪ್‌ಗಳನ್ನು ಸಂಜೆ ಮುಚ್ಚಲಾಗುತ್ತದೆ. ಜನರಿಗೆ ಅಗತ್ಯವಿರುವ ಹಾಲು ಹಾಗೂ ಔಷಧ ಅಂಗಡಿಗಳನ್ನು ಮಾತ್ರ ತೆರೆಯಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net