ನಿವೇಶನ ವಿತರಿಸಲು ಯೋಜನೆ, ದುಂಡಗಿ ಕ್ಯಾಂಪ್‌ನಲ್ಲಿ ಸಚಿವ ಶಿವರಾಜ ತಂಗಡಗಿ ಹೇಳಿಕೆ

Distribution Program
ಕಾರಟಗಿ ತಾಲೂಕಿನ ದುಂಡಗಿ ಕ್ಯಾಂಪ್‌ನಲ್ಲಿ ಹಮ್ಮಿಕೊಂಡಿದ್ದ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು. ಗ್ಯಾರಂಟಿ ಯೋಜನೆ ತಾಲೂಕಾಧ್ಯಕ್ಷ ದೇವಪ್ಪ ಬಾವಿಕಟ್ಟಿ, ತಹಸೀಲ್ದಾರ್ ಎಂ. ಕುಮಾರಸ್ವಾಮಿ, ಮುಖಂಡರಾದ ಶರಣಪ್ಪ ಪರಕಿ, ಮಲ್ಲಿಕಾರ್ಜುನ ತೊಂಡಿಹಾಳ, ಸೋಮನಾಥ ದೊಡ್ಡಮನಿ ಇದ್ದರು.
Published on

ಕಾರಟಗಿ: ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ತಾಲೂಕಿನ ದುಂಡಗಿ ಕ್ಯಾಂಪ್‌ನಲ್ಲಿ ತಾಲೂಕಾಡಳಿತ ಹಾಗೂ ತಾಪಂನಿಂದ ಗುರುವಾರ ಹಮ್ಮಿಕೊಂಡಿದ್ದ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯ ಭೂ ಕಂದಾಯ ಕಾಯ್ದೆ 1964ರ ಕಲಂ 94 ಸಿಸಿ ಅಡಿ ಜನರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಕ್ಕುಪತ್ರ ವಿತರಣೆಯನ್ನು ಈಗ ಮಾಡಲಾಗುತ್ತಿದೆ.

31ನೇ ವಿತರಣಾ ಕಾಲುವೆ ಮತ್ತು ರಾಜ್ಯ ಹೆದ್ದಾರಿ ಬದಿ ಗುಡಿಸಲು, ಶೆಡ್‌ಗಳನ್ನು ಹಾಕಿಕೊಂಡು ವಾಸಿಸುತ್ತಿರುವ ನಿವಾಸಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಅವರೆಲ್ಲರಿಗೂ ಸಮೀಪದ ದೇವಿಕ್ಯಾಂಪ್‌ನ ಸರ್ಕಾರಿ ಜಾಗದಲ್ಲಿ ನಿವೇಶನಗಳನ್ನು ವಿತರಿಸಲು ಯೋಜಿಸಲಾಗಿದೆ. ಈಗಾಗಲೇ ಕ್ಷೇತ್ರದ ಬಹುತೇಕ ಕ್ಯಾಂಪ್, ಕೆಲ ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿ ಜನರಿಗೆ ಮೂಲಸೌಕರ್ಯ ಒದಗಿದಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net