ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸಿ

190920 Karatagi Valmiki Comminiy Protest
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಆಗ್ರಹಿಸಿ ಕಾರಟಗಿಯಲ್ಲಿ ಮಹರ್ಷಿ ವಾಲ್ಮೀಕಿ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
Published on

ಕಾರಟಗಿ: ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿ ಮಹರ್ಷಿ ವಾಲ್ಮೀಕಿ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಕಲಿ ಜಾತಿ ಪ್ರಮಾಣಪತ್ರಗಳನ್ನು ನೀಡಿದ ಅಧಿಕಾರಿಗಳು ಹಾಗೂ ಪಡೆದ ಫಲಾನುಭವಿಗಳ ವಿರುದ್ಧ ಶಿಸ್ತು ಕ್ರಮವಹಿಸಬೇಕು. ಜಿಲ್ಲೆಯಲ್ಲಿ ವಾಲ್ಮೀಕಿ ಪಪಂ ಅಭಿವೃದ್ಧಿ ನಿಗಮವನ್ನು ಪ್ರತ್ಯೇಕಿಸಬೇಕು. ಪಪಂ ಪ್ರತ್ಯೇಕ ಸಚಿವಾಲಯ ಮಾಡಬೇಕು. ಮಹರ್ಷಿ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಯನ್ನು ಬಂಧಿಸಿ, ಗಡಿಪಾರು ಮಾಡಬೇಕು. ಕನಕಗಿರಿ ಹಾಗೂ ಕಾರಟಗಿಯಲ್ಲಿ ಸಮುದಾಯದವರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡದೆ ಹಾಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಪಪಂ ವಿದ್ಯಾರ್ಥಿಗಳಿಗೆ ವಸತಿ ನಿಲಯ, ಮೂಲ ಸೌಕರ್ಯಗಳನ್ನು ಓದಗಿಸಬೇಕು. ನಿಗದಿತ ಸಮಯದೊಳಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಬೇಕು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಸಮುದಾಯದ ಮುಖಂಡರಾದ ನಾಗರಾಜ ಬಿಲ್ಗಾರ್, ಅಂಬಣ್ಣ ನಾಯಕ, ಗದ್ದೆಪ್ಪ, ಗವಿಸಿದ್ದಪ್ಪ, ಶಿವರಡ್ಡಿ ವಕೀಲ, ಶಿವಣ್ಣ ಹುಡೇದ್, ದುರುಗೇಶ, ಕನ್ನಯ್ಯ ಸೋಮನಾಳ, ಲಿಂಗರಾಜ, ಬಸವರಾಜ ಬೂದಿ, ಆನಂದ, ರಮೇಶ್, ಮಂಜುನಾಥ, ರಮೇಶ್ ನಾಡಿಗೇರ್ ಸೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net