ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ

TEMPLE
ಕಾರಟಗಿ ತಾಲೂಕಿನ ಕಿಂದಿಕ್ಯಾಂಪ್‌ನಲ್ಲಿ ಕೋದಂಡರಾಮ ದೇವಾಲಯ ನಿರ್ಮಾಣಕ್ಕೆ ಭಕ್ತರು ಶುಕ್ರವಾರ ಭೂಮಿಪೂಜೆ ನೆರವೇರಿಸುವ ಜತೆಗೆ ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡರು.
Published on

ಕಾರಟಗಿ: ತಾಲೂಕಿನ ಯರಡೋಣಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಂದಿಕ್ಯಾಂಪ್‌ನಲ್ಲಿ ಭಕ್ತರು ಒಂದು ಎಕರೆ ಪ್ರದೇಶದಲ್ಲಿ ಕೋದಂಡರಾಮ ದೇವಸ್ಥಾನ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಒಂದು ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಯೋಜಿಸಲಾಗಿದೆ. ದೇವಸ್ಥಾನ ನಿರ್ಮಾಣ ಮಾಡುವ ಸ್ಥಳದಲ್ಲಿ ಬೆಳಗ್ಗೆಯಿಂದಲೇ ಪಂಡಿತರಿಂದ ವೇದ ಮಂತ್ರೋಚ್ಛಾರ, ಹೋಮ-ಹವನ, ದೇವತೆಗಳ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಮಧ್ಯಪಾಲ್ಗುಣ ಬಹುಳ ಏಕಾದಶಿಯ ಪವಿತ್ರ ದಿನದಂದು ಭವ್ಯವಾದ ಕೋದಂಡರಾಮ ದೇವಾಲಯಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಇದಕ್ಕೆ ಇಡೀ ಗ್ರಾಮಸ್ಥರೆಲ್ಲರು ತನು, ಮನ, ಧನದಿಂದ ಸಹಕರಿಸುತ್ತಿರುವುದು ಹೆಮ್ಮೆಯ ಸಂಗತಿ. ಈ ದೇವಾಲಯ ಭಕ್ತರ ಶ್ರದ್ಧಾಭಕ್ತಿಯ ಕೇಂದ್ರವಾಗಲಿದೆ ಎಂದು ದೇವಸ್ಥಾನ ಸಮಿತಿ ಪದಾಧಿಕಾರಿಗಳು ತಿಳಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net