ಮಾನಸಿಕ, ದೈಹಿಕ ಸದೃಢತೆಗೆ ಕರಾಟೆ ಸಹಕಾರಿ

17 HANUR 4
filter: 0; fileterIntensity: 0.0; filterMask: 0; hdrForward: 0; highlight: false; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.02750018, 0.514948);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 31;
Published on

ಹನೂರು: ಪ್ರತಿಯೊಬ್ಬರೂ ಶ್ರದ್ಧೆಯಿಂದ ತರಬೇತಿ ಪಡೆಯುವುದರ ಮೂಲಕ ಉತ್ತಮ ಕರಾಟೆ ಪಟುಗಳಾಗಿ ಹೊರಹೊಮ್ಮಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಭಾನುವಾರ ಗುರು ಪರಶುರಾಮ ಕರಾಟೆ ಅಕಾಡೆಮಿ ವತಿಯಿಂದ ಕರಾಟೆ ತರಬೇತಿಯಲ್ಲಿ ಪ್ರಾವಿಣ್ಯ ಮತ್ತು ಉತ್ತಮ ಕೌಶಲ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಎಷ್ಟು ಅಗತ್ಯವೋ ಅದೇ ರೀತಿ ಕರಾಟೆ ಕೂಡ ಒಂದು. ಕರಾಟೆ ಕಲಿಯುವುದರಿಂದ ಜೀವನದಲ್ಲಿ ಧೈರ್ಯ ತಂದುಕೊಡುತ್ತದೆ. ಜೀವಕ್ಕೆ ಅಪಾಯ ಎದುರಾದಾಗ ಸಹಾಯವಾಗುತ್ತದೆ. ಇದರಿಂದ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಕರಾಟೆಯು ಅಗತ್ಯವಾಗಿದೆ. ಈ ದೆಸೆಯಲ್ಲಿ ಹನೂರಿನಲ್ಲಿ ಮಕ್ಕಳಿಗೆ ಕರಾಟೆ ತರಬೇತಿಯನ್ನು ನೀಡುತ್ತಿರುವುದು ಮೆಚ್ಚುಗೆಯ ಸಂಗತಿ. ಆದ್ದರಿಂದ ಪ್ರತಿಯೊಬ್ಬರೂ ಆಸಕ್ತಿ ವಹಿಸಿ ತರಬೇತಿಯನ್ನು ಪಡೆದುಕೊಳ್ಳಬೇಕು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆಗೈದು ತಾಲೂಕಿಗೆ ಕೀರ್ತಿ ತರಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ಪವಿತ್ರಾ ಮಾತನಾಡಿ, ಪಟ್ಟಣದಲ್ಲಿ ಕಳೆದ 2 ವರ್ಷಗಳಿಂದ ಮಕ್ಕಳಿಗೆ ಕರಾಟೆ ತರಬೇತಿ ನೀಡಲಾಗುತ್ತಿದ್ದು, ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ ಮಕ್ಕಳಿಗೆ ಪ್ರೋತ್ಸಾಹ ನೀಡುವುದರ ಮೂಲಕ ಉತ್ತೇಜನ ನೀಡಬೇಕಿದೆ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಮುಖಂಡರಾದ ಜಸ್ಸಿಂಪಾಷ, ಪ್ರಸನ್ನ, ಮಾದಪ್ಪ ಹಮೀದ್, ತರಬೇತುದಾರ ರಮೇಶ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net