ಮಂಗಳೂರು ಪಿಯು ಕಾಲೇಜಿನ ವಿದ್ಯಾರ್ಥಿನಿ ಕರಾಟೆಯಲ್ಲಿ ಪ್ರಥಮ

BARAKHA NEW
Published on

ಹುಬ್ಬಳ್ಳಿ : ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹುಬ್ಬಳ್ಳಿ ಜಯನಗರದ ಮಂಗಳೂರು ಪಿಯು ಕಾಲೇಜಿನ ವಿದ್ಯಾರ್ಥಿನಿ ಬರಖಾ ಐ. ಬಂಕಾಪುರ ಭಾಗವಹಿಸಿ, ಚಿನ್ನದ ಪದಕವನ್ನು ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷೆ ಹೇಮಲತಾ ಬಸವರಾಜ ಹೊರಟ್ಟಿ, ಕಾರ್ಯದರ್ಶಿ ವಸಂತ ಹೊರಟ್ಟಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net