

ಮಂಗಳೂರು: ದೀಪಾವಳಿ ಸಂದರ್ಭ ಪ್ರಯಾಣಿಕರ ದಟ್ಟಣೆ ನಿಯಂತ್ರಣ ಪ್ರಯುಕ್ತ ಬೆಂಗಳೂರು- ಕಾರವಾರ ನಡುವೆ ಸ್ಪೆಷಲ್ ರೈಲು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಶ್ರೀ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಕಾರವಾರ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು (06597) ಅಕ್ಟೋಬರ್ 30 ರಂದು ಮಧ್ಯಾಹ್ನ ಒಂದು ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ ಮುಂಜಾನೆ 4 ಗಂಟೆಗೆ ಕಾರವಾರ ತಲುಪಲಿದೆ.
ಕಾರವಾರ- ಶ್ರೀ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 31 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಪ್ರಯಾಣ ಆರಂಭಿಸಿ ಮರುದಿನ ಮುಂಜಾನೆ 4 ಗಂಟೆಗೆ ಬೆಂಗಳೂರು ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ (ಬೈಂದೂರು), ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲ ಸ್ಟೇಷನ್ ನಲ್ಲಿ ರೈಲಿಗೆ ನಿಲುಗಡೆ ದೊರೆಯಲಿದೆ.