

ಮಡಿಕೇರಿ:
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಸಮಾಜ ಸೇವಕ ಮಹದೇವಣ್ಣ ಧ್ವಜಾರೋಹಣ ನೆರವೇರಿಸಿದರು. ವೇದಿಕೆಯ ಅಧ್ಯಕ್ಷÀ ರವಿಗೌಡ ರಾಜ್ಯೋತ್ಸವದ ಶುಭಾಶಯ ಕೋರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವೇದಿಕೆಯ ತಾಲೂಕು ಉಪಾಧ್ಯಕ್ಷ ನಾಗೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಅಕ್ಷಿತ್, ನಗರ ಉಪಾಧ್ಯಕ್ಷೆ ಲಿಲ್ಲಿಗೌಡ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅಭಿಮಾನಿ ಸಂಘದ ಅಧ್ಯಕ್ಷÀ ಮುನೀರ್ ಮಾಚರ್, ವೇದಿಕೆಯ ಸದಸ್ಯರುಗಳಾದ ಅಜಿತ್, ದೀಕ್ಷಿತ್, ವಿಜೇಶ್, ಶೇಕ್ ಆದಂ ಇದ್ದರು.