

ಮಡಿಕೇರಿ:
ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಜ್ಯೋತಿ ಕುದುಪಜೆ ಮತ್ತು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯ ದೇವಾಂಗ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ನೇತೃತ್ವದಲ್ಲಿ ಈ ನೇಮಕ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ಈ ಸಂದರ್ಭ ಇದ್ದರು.