ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹ: ಜಿಲ್ಲಾಡಳಿತಕ್ಕೆ ಕರವೇ ಕಾರ್ಯಕರ್ತರ ಮನವಿ

Karave appeals to the state government mandya
Published on

ಮಂಡ್ಯ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತದ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡು ಕಾರ್ಯಕರ್ತರು ಉದ್ಯೋಗಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ರಾಜ್ಯ ಉಪಾಧ್ಯಕ್ಷ ಮಾ.ಸೋ.ಚಿದಂಬರ್, ಖಾಸಗಿ ವಲಯದ ಶೇ.100ರಷ್ಟು ಹುದ್ದೆಗಳು ಕನ್ನಡಿಗರೇ ದಕ್ಕಬೇಕು. ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ತಾಲೂಕು ಕರವೇ ಅಧ್ಯಕ್ಷ ಡಿ.ಅಶೋಕ್, ಪುಟ್ಟಮಲ್ಲಯ್ಯ, ಜಯರಾಂ, ವರದೇಗೌಡ, ಶಿವರಾಜು, ಎಚ್.ಎಸ್.ನಾಗರಾಜು, ಎಂ.ಪಿ.ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net