ರೈತರ ಬೇಡಿಕೆ ಈಡೇರಿಸಲು ಕರವೇ ಆಗ್ರಹ

18 hkr 02 KARAVE
Published on

ಹಿರೇಕೆರೂರ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ವತಿಯಿಂದ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ಬಾಳಂಬೀಡ ವೃತ್ತದಿಂದ ತಹಸೀಲ್ದಾರ್ ಕಚೇರಿಯವರೆಗೆ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಆಗಮಿಸಿ ಗುರುವಾರ ಪ್ರತಿಭಟನೆ ನಡೆಸಿದರು.


ಕರವೇ ತಾಲೂಕು ಅಧ್ಯಕ್ಷ ವೀರೇಶ ಹಡಪದ ಮಾತನಾಡಿ, ಹಿರೇಕೆರೂರ, ರಟ್ಟಿಹಳ್ಳಿ ತಾಲೂಕುಗಳನ್ನು ಬರಗಾಲ ಎಂದು ಘೊಷಣೆ ಮಾಡಬೇಕು. ಕಳೆದ ವರ್ಷದ ಬೆಳೆ ವಿಮೆ ಜಮೆ ಮಾಡಬೇಕು. ಕೃಷಿ ಸಾಲವನ್ನು ರೈತರಿಂದ ಬಲವಂತವಾಗಿ ವಸೂಲಿ ಮಾಡಬಾರದು. ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.


ತಹಸೀಲ್ದಾರ್ ಡಾ. ಪ್ರಭಾಕರಗೌಡ.ಎಚ್., ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


ಕರವೇ ಮಹಿಳಾ ಕಾರ್ಯಾಧ್ಯಕ್ಷೆ ಸುವರ್ಣಾ.ಎಚ್., ಜಿಲ್ಲಾಧ್ಯಕ್ಷ ರಾಮು ತಳವಾರ, ಜಿಲ್ಲಾ ಮಹಿಳಾ ಅಧ್ಯಕ್ಷೆ ಸುಮಾ ಪುರದ, ಮಂಜುನಾಥ ದಾನಪ್ಪನವರ, ಮಂಜುಳಾ ಏಳುಕೊಳಗದ, ಚನ್ನಮ್ಮ ಕುರಿಗೇರ, ಜಿ.ಎಚ್. ಪಾಟೀಲ, ಮಂಜುನಾಥ ಕುಲ್ಕರ್, ಉಮೇಶ ಮುದ್ದಿಗೌಡರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net