ನವೆಂಬರ್‌ನಲ್ಲಿ ಕನ್ನಡ ದೀಕ್ಷಾ ಪ್ರತಿಜ್ಞೆ: ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ಹೇಳಿಕೆ

Karave District Level Meeting Mandya
Published on

ಮಂಡ್ಯ: ನವೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಕನ್ನಡ ದೀಕ್ಷಾ ಪ್ರತಿಜ್ಞಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರವೇ 28 ವರ್ಷದಿಂದ ನಾಡು, ನುಡಿ, ಜಲ, ಭಾಷೆ ವಿಚಾರದಲ್ಲಿ ಹೋರಾಟ ಮಾಡುತ್ತಿದೆ. ಇಂದಿನ ಯುವ ಸಮೂಹ ಹಾಗೂ ಜನಸಾಮಾನ್ಯರಿಗೆ ಕನ್ನಡದ ಸಮಸ್ಯೆಗಳ ಬಗ್ಗೆ ಆಗುತ್ತಿರುವ ಬಗ್ಗೆ ಅರಿವು ಮೂಡಿಸಲು ಕನ್ನಡದ ದೀಕ್ಷಾ ಪ್ರತಿಜ್ಞಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಅಂಗಡಿ, ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳ ಹಾಗೂ ಬ್ಯಾಂಕ್‌ನಲ್ಲಿ ಬಳಸುವ ನಾಮಫಲಕಗಳಲ್ಲಿ ಕನ್ನಡವನ್ನು ಬಳಸಬೇಕೆಂದು ಸರ್ಕಾರ ಆದೇಶ ಮಾಡಿದೆ. ಆದಾಗ್ಯೂ ಕೆಲವರು ನಿರ್ಲಕ್ಷೃ ವಹಿಸಿದ್ದಾರೆ. ಇಂತಹವರ ವಿರುದ್ಧ ಜಿಲ್ಲಾಡಳಿತ ಯಾವುದೇ ಕ್ರಮ ವಹಿಸಿಲ್ಲ. ನವೆಂಬರ್ ಒಳಗೆ ನಾಮಫಲಕದಲ್ಲಿ ಕನ್ನಡ ಬಳಸದಿದ್ದರೆ ಮಸಿ ಬಳಿಯುವ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಕರವೇ ರಾಜ್ಯ ಉಪಾಧ್ಯಕ್ಷ ಮ.ಸೋ.ಚಿದಂಬರ್, ಜಿಲ್ಲಾ ಗೌರವಾಧ್ಯಕ್ಷ ಕೆ.ಟಿ.ಶಂಕರೇಗೌಡ, ಜಿಲ್ಲಾ ಮಹಿಳಾಧ್ಯಕ್ಷೆ ಭಾರತೀ ಕುಮಾರ್, ಉಪಾಧ್ಯಕ್ಷ ಶಿವಪ್ರಸಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net