ಆಡಂಬರದಿಂದ ಕೂಡಿದ್ದ ಮಂಡ್ಯ ಸಾಹಿತ್ಯ ಸಮ್ಮೇಳನ

24blrp3
ಬೇಲೂರಿಗೆ ಆಗಮಿಸಿದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ ಅವರನ್ನು ಕಾರ್ಯಕರ್ತರು ಅಭಿನಂದಿಸಿದರು.
Published on

ಬೇಲೂರು: ಸಾಹಿತ್ಯ ಸಮ್ಮೇಳನಗಳು ಕೇವಲ ಆಡಂಬರಕ್ಕೆ ಸೀಮಿತವಾಗಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾಗುತ್ತಿದೆ ಎಂದು ಕರವೇ ಅಧ್ಯಕ್ಷ ಪ್ರವೀಣ್‌ಶೆಟ್ಟಿ ಹೇಳಿದರು.

ಕಾರ್ಯಕ್ರಮ ನಿಮಿತ್ತ ಮಂಗಳವಾರ ಬೇಲೂರಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಆಡಂಬರದಿಂದ ನಡೆಸಿದರೆ ಸಾಲದು ಅಲ್ಲಿ ಕೈಗೊಂಡ ನಿರ್ಣಯಗಳು ಜಾರಿಯಾಗಬೇಕು, ಜಾರಿಯಾದ ನಿರ್ಣಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕೆಂದು ನೆಪ ಮಾತ್ರಕ್ಕೆ ಕಾನೂನು ಜಾರಿಯಾಗಿದೆ. ಕನ್ನಡದ ಮೇಲೆ ಇತರ ಭಾಷೆಯ ಬಲವಂತದ ಹೇರಿಕೆ ನಡೆಯುತ್ತಿದೆ. ಆದರೂ ಇದನ್ನು ಸರ್ಕಾರ ಸರಿಪಡಿಸಲು ಮುಂದೆ ಬರುತ್ತಿಲ್ಲ. ಉದ್ಯೋಗದಲ್ಲಿ ಅನ್ಯ ಭಾಷಿಕರ ನೇಮಕ ಖಂಡನಿಯ ಎಂದರು.

ಮಂಡ್ಯದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಆಡಂಬರದಿಂದ ಕೂಡಿತ್ತು. ಕರ್ನಾಟಕದಲ್ಲಿ ಕನ್ನಡ ಉಳಿವಿಗಾಗಿ ಸಾಹಿತಿಗಳು ಪ್ರತಿ ಸಮ್ಮೇಳನದಲ್ಲಿ ಹೇಳುತ್ತಿದ್ದರೂ ಪ್ರಯೋಜನವಾಗುತ್ತಿಲ್ಲ. ಮಲೆನಾಡು ಭಾಗದಲ್ಲಿ ಆನೆ ಹಾವಳಿಗೆ ಸಕಲೇಶಪುರದಲ್ಲಿ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಸರ್ಕಾರ ಯಾವುದೇ ಪರಿಹಾರ ಕಂಡುಕೊಂಡಿಲ್ಲ. ಮುಖ್ಯಮಂತ್ರಿ, ಅರಣ್ಯ ಸಚಿವರು ಕಾಡಾನೆ ವಿಚಾರವಾಗಿ ಹೆಚ್ಚಿನ ಗಮನಹರಿಸಿಲ್ಲ. ಆನೆ ಕಾರಿಡಾರ್ ಮಾಡಬೇಕು, ಶಾಶ್ವತ ಪರಿಹಾರ ಮಾಡದಿದ್ದಲ್ಲಿ ನಮ್ಮ ಸಂಘಟನೆಯಿಂದ ಮತ್ತೊಮ್ಮೆ ಉಗ್ರ ಚಳವಳಿಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರವೇ(ಪ್ರವೀಣ್‌ಶೆಟ್ಟಿ)ಬಣದ ತಾಲೂಕು ಅಧ್ಯಕ್ಷ ವಿ.ಎಸ್.ಭೋಜೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಮಲೆನಾಡು ಭಾಗದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಅಂತಹವರನ್ನು ಗುರುತಿಸಿ ಅವರ ದೇಶಕ್ಕೆ ಕಳಿಸಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಮತಕ್ಕಾಗಿ ನಕಲಿ ಆಧಾರ್ ಕಾರ್ಡ್ ನೀಡಿ ರಕ್ಷಿಸುತ್ತಿರುವ ಬಗ್ಗೆ ಆರೋಪ ಕೇಳಿ ಬರುತ್ತಿದೆ. ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ಓಡಿಸಬೇಕು, ಇಲ್ಲದಿದ್ದಲ್ಲಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದರು.

ಕರವೇ(ಪ್ರವೀಣ್‌ಶೆಟ್ಟಿ)ಬಣದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಗೌರವಾಧ್ಯಕ್ಷ ಗಿರೀಶ್, ಯುವ ಘಟಕದ ಅಧ್ಯಕ್ಷ ಸತೀಶ್, ಉಪಾಧ್ಯ ಮಂಜು ಆಚಾರ್, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಗಣೇಶ್, ನಿರ್ದೇಶಕ ವಿಜಯ ಕುಮಾರ್ ಇದ್ದರು,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net