ಕರವೇ ಪ್ರತಿಭಟನೆ

Narayangowda
Published on

ಬೆಂಗಳೂರು: ಹಿಂದಿ ದಿವಸ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಶನಿವಾರ (ಸೆ. 14) ಬೆಳಗ್ಗೆ 11 ಗಂಟೆಗೆ ಸ್ವಾತಂತ್ರ್ಯ ಉದ್ಯಾನದ ಎದುರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಭಾರತ ಒಕ್ಕೂಟ ಸರ್ಕಾರ ಪ್ರತಿ ವರ್ಷ ಸೆ. 14ರಂದು ಹಿಂದಿ ದಿವಸ ಆಚರಣೆಯ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಭಾಷೆ ಹೇರುವ ಹುನ್ನಾರ ನಡೆಸುತ್ತ ಬಂದಿದೆ. ಇದು ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net