ಸ್ಕೌಟ್ಸ್, ಗೈಡ್ಸ್‌ನಿಂದ ಕಾರ್ಗಿಲ್ ವಿಜಯೋತ್ಸವ

30adarshkdga3
Published on

ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕೊಡಗಿನ ಮೂರು ಯೋಧರು ಸೇರಿದಂತೆ ಕಾರ್ಗಿಲ್ ಯುದ್ಧದಲ್ಲಿ ಮರಣಪಟ್ಟ ದೇಶದ ಎಲ್ಲಾ ಯೋಧರಿಗೆ ಮಡಿಕೇರಿ ನಗರ ಸಭೆ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ನಮನ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರದಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಮೇಜರ್ ಓಡಿಯಂಡ ಚಿಂಗಪ್ಪ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸೀಕ್ವೆರಾ, ಸಹಾ ಕಾರ್ಯದರ್ಶಿ ಬೊಳ್ಳಜಿರ.ಬಿ.ಅಯ್ಯಪ್ಪ, ಜಿಲ್ಲಾ ಸಂಘಟಕಿ ದಮಯಂತಿ, ಜಿಲ್ಲಾ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ಖಜಾಂಚಿ ಪುಷ್ಪವೇಣಿ, ಸ್ಕೌಟ್ಸ್ ಮಾಸ್ಟರ್ ಚೆರುಮಂದಂಡ ಕುಟ್ಟಪ್ಪ, ಗೈಡ್ ಕ್ಯಾಪ್ಟನ್ ವೀಣಾಕುಮಾರಿ, ವಿನಯ್ ಜೋಯಿಸಿ, ಜನಾರ್ದನ್, ರತೀಶ್ ನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net