ಕಾರ್ಗಿಲ್ ವಿಜಯ ದಿವಸ ಆಚರಣೆ

hbr (1)
Published on

ಹೆಬ್ರಿ: ಕಾರ್ಗಿಲ್ ಭಾಗದಲ್ಲಿ ನಾವು ಕರ್ತವ್ಯ ನಿರ್ವಹಿಸಿದ್ದೇವೆ. ಅಲ್ಲಿ ಕರ್ತವ್ಯ ನಿರ್ವಹಿಸುವುದು ಅತ್ಯಂತ ಕಠಿಣ ಕಾರ್ಯ. ಆಪರೇಷನ್ ವಿಜಯ್ ಹೆಸರಿನಲ್ಲಿ ಆರಂಭಗೊಂಡ ಯುದ್ಧದಲ್ಲಿ ನಮಗೆ ಜಯ ಲಭಿಸಿದೆ. ಇದರಲ್ಲಿ ಅನೇಕ ಅಧಿಕಾರಿಗಳು, ಯುವ ಸೈನಿಕರು ಹುತಾತ್ಮರಾಗಿದ್ದಾರೆ. ವಿಜಯದ ನೆನಪಿನಲ್ಲಿ ಕಾರ್ಯಕ್ರಮ ಆಚರಿಸುವ ನಾವು ನಮ್ಮಲ್ಲಿ ದೇಶಭಕ್ತಿಯ ಕಿಚ್ಚನ್ನು ಹಚ್ಚಿಸಿಕೊಳ್ಳಬೇಕು ಎಂದು ನಿವತ್ತ ಸೈನಿಕ ಶಂಕರ್ ಶೆಟ್ಟಿ ಹೇಳಿದರು.

ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮಕ್ಕೂ ಮೊದಲು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ, ವಿಷ್ಣುಮೂರ್ತಿ ನಾಯಕ್, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ, ಪ್ರಾಂಶುಪಾಲ ಪ್ರಕಾಶ್ ಜೋಗಿ, ಪಿಆರ್‌ಒ ವಿಜಯ ಕುವಾರ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಚಿತಾ ಕುಲಾಲ್ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net