ಮಡಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

MDk06
Published on

ಮಡಿಕೇರಿ: ಹಿಂದು ಜಾಗರಣ ವೇದಿಕೆಯ ಯುವ ಘಟಕ ಹಿಂದು ಯುವ ವಾಹಿನಿ ನೇತೃತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಮಡಿಕೇರಿಯಲ್ಲಿ ಮಂಗಳವಾರ ನಡೆಯಿತು.


ನಗರದ ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸೈನಿಕರಿಗೆ ಗೌರವ ನಮನಗಳನ್ನು ಸಲ್ಲಿಸಲಾಯಿತು.


ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ಮಾತನಾಡಿ, ಭಾರತೀಯ ಸೇನೆಗೆ ಕೊಡಗು ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಭಾರತೀಯ ಸೈನಿಕರು ದೇಶಕ್ಕಾಗಿ ಯಾವುದೇ ತ್ಯಾಗ ಬಲಿದಾನಗಳಿಗೆ ಮಾನಸಿಕವಾಗಿ ತಯಾರಿರುವ ಮನಸ್ಥಿತಿಯವರಾಗಿರುವ ಪರಿಣಾಮ ದೇಶ ಅತ್ಯಂತ ಸುರಕ್ಷಿತವಾಗಿದೆ ಎಂದರು.


ಈ ಸಂದರ್ಭದಲ್ಲಿ ಖ್ಯಾತ ಅಂಕಣಕಾರ, ಸಾಮಾಜಿಕ ಚಿಂತಕರಾದ ಪ್ರಕಾಶ್ ಮಲ್ಪೆ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ನಿವೃತ್ತ ಸೇನಾಧಿಕಾರಿಗಳಾದ ಮೇಜರ್ ಚಿಂಗಪ್ಪ, ಹಿಂದು ಜಾಗರಣ ವೇದಿಕೆಯ ಮಂಗಳೂರು ವಿಭಾಗ ಸಂಯೋಜಕ ಮಹೇಶ್ ಕಡಗದಾಳು, ಹಿಂ.ಜಾ.ವೇ. ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್, ಹಿಂದು ಯುವ ವಾಹಿನಿಯ ಪ್ರಮುಖರಾದ ವಿನಯ್, ಹಿಂದು ಜಾಗರಣ ವೇದಿಕೆಯ ಪದಾಧಿಕಾರಿಗಳು, ನಗರ ಸಭಾ ಸದಸ್ಯರು, ಮಾಜಿ ಸೈನಿಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರುಗಳು ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net