ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ 26ರಂದು

IMG-20230722-WA0064.jpg
Published on

ಬೆಳಗಾವಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಘಟಕದಿಂದ ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಜು.26ರಂದು ಬೆಳಗ್ಗೆ 11 ಗಂಟೆಗೆ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಸಪ್ಪ ತಳವಾರ ತಿಳಿಸಿದರು
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಜ್ಯೋತಿ ಬೆಳಗಿಸುವರು. ಶಾಸಕರಾದ ಅಭಯ ಪಾಟೀಲ, ಆಸೀಫ್ ಸೇಠ್, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಇತರರು ಪಾಲ್ಗೊಳ್ಳುವರು. ಸೇರಿ ಮತ್ತಿತರರು ಆಗಮಿಸುವರು ಎಂದರು.
ಬೆಳಗ್ಗೆ 11 ಗಂಟೆಗೆ ‘ಮಾಜಿ ಸೈನಿಕನ ಮನ’ ಎಂಬ ಕವನ ಬಿಡುಗಡೆ ಮಾಡಲಾಗುವುದು. ನಂತರ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಹಾಗೂ ಹುತಾತ್ಮ ವೀರಯೋಧರಿಗೆ ‘ಕಾರ್ಗಿಲ್ ವೀರಯೋಧ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಆದರ್ಶ ಮಾಜಿ ಸೈನಿಕ ಹಾಗೂ ಆದರ್ಶ ಸೈನಿಕ ದಂಪತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದಕ್ಕೂ ಮೊದಲು ಬೆಳಗ್ಗೆ 8.30ರಿಂದ ಬೆಳಗ್ಗೆ 10.30ರವರೆಗೆ ಬೈಕ್ ರ‌್ಯಾಲಿ ನಡೆಯಲಿದೆ. ಬಳಿಕ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಾಗೂ ಡಾ. ಪಟವರ್ಧನ್ ಅವರ ನಂದಾದೀಪ ನೇತ್ರಾಲಯದ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉಚಿತ ನೇತ್ರ ತಪಾಸಣೆ ಶಿಬಿರ ನಡೆಯಲಿದೆ ಎಂದು ತಿಳಿಸಿದರು.
ಜಗದೀಶ ಪೂಜಾರಿ, ವೀರಪಾಕ್ಷ ತಿಳಗಂಜಿ, ನಾಗಪ್ಪ ಕಳಸಣ್ಣವರ, ಶಿವಬಸಪ್ಪ ಕಾಡಣ್ಣವರ, ರಮೇಶ ಚೋಗ್ಲಾ, ಮಡಿವಾಳಪ್ಪ ಕಲಭಾವಿ, ದಯಾನಂದ ಡಿ., ಗೌರವ್ವ ಅಕ್ಕಣ್ಣವರ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net