ಕರಿಕೆ ಶಾಲೆಗೆ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

karike school
Published on

ಮಡಿಕೇರಿ:

ಕೊಡಗು ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ಕರಿಕೆ ಕಾಲೋನಿ ಸÀರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ ಲಭಿಸಿದೆ. ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಬನಶಂಕರಿಯ ಶ್ರೀ ಘನಲಿಂಗ ಶಿವಯೋಗಿ ಸಭಾಭವನದಲ್ಲಿ ಈಚೆಗೆ ನಡೆದ ಕನ್ನಡ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯದ ಹಿರಿಯ ಶಿಕ್ಷಕರಿಗೆ ನೀಡುವ ಸದ್ಗುರು ದ್ರೋಣಾಚಾರ್ಯ ಪ್ರಶಸ್ತಿಯನ್ನು ಕರಿಕೆ ಶಾಲೆಯ ಮುಖ್ಯ ಶಿಕ್ಷಕಿ ಪಿ.ಪಿ. ಪ್ರಸನ್ನ ಕುಮಾರಿ ಹಾಗೂ ಸಹ ಶಿಕ್ಷಕಿ ಬಿ.ಟಿ. ಮಹಾಲಕ್ಷಿö್ಮ ಅವರಿಗೆ ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net