

ಕಾರ್ಕಳ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘವನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಿವೃತ್ತ ಇಸ್ರೋ ವಿಜ್ಞಾನಿ ಇಡ್ಯಾ ಜನಾರ್ದನ್ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ 12 ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲೆ ಅನ್ನಪೂರ್ಣ ಕಾಮತ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಿವೃತ್ತ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್, ಕಾಲೇಜು ಅಭಿವೃದ್ಧಿ ಸಮಿತಿ ಕೋಶಾಧಿಕಾರಿ ನಿತ್ಯಾನಂದ ಪೈ, ಸದಸ್ಯರಾದ ಶ್ರೀವರ್ಮ ಅಜರಿ, ಶ್ರೀನಿವಾಸ ಕಾರ್ಲ, ನಿರಂಜನ್ ಜೈನ್ ಉಪಸ್ಥಿತರಿದ್ದರು.
ಹಿರಿಯ ಉಪನ್ಯಾಸಕಿ ಫ್ಯಾನಿ ಜಾಯ್ಸ ಸ್ವಾಗತಿಸಿದರು. ಉಪನ್ಯಾಸಕ ಸದಾನಂದ ಸಾಧಕ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಜಯಶ್ರೀ ಹೆಗ್ಡೆ ಕಾಲೇಜಿನ ವಿವಿಧ ಸಂಘಗಳ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಶೋಭಾಕುಮಾರಿ ವಂದಿಸಿದರು. ವಿದ್ಯಾರ್ಥಿ ಸಂಘದ ಸಂಚಾಲಕಿ ಅಶ್ವಿನಿ ನಿರೂಪಿಸಿದರು.