ಕಾರ್ಕಳ ಲೈಂಗಿಕ ಕಿರುಕುಳ, ಮುಖ್ಯ ಶಿಕ್ಷಕನ ಬಂಧನ

arrested
Published on

ಮಂಗಳೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಅಡಿಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಬೋಳ ಗ್ರಾಮದಲ್ಲಿ ನಡೆದಿದೆ.


ಬೋಳ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ಬೋಳ ಪಿಲಿಯೂರು ಇಚ್ಚೋಡಿ ಶ್ರೀ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ವಂಜಾರಕಟ್ಟೆ ನಿವಾಸಿ ರಾಜೇಂದ್ರ ಆಚಾರ್(58) ಬಂಧಿತ ಆರೋಪಿ.


ರಾಜೇಂದ್ರ ಆಚಾರ್ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಅನೇಕ ದೂರುಗಳಿರುವುದಾಗಿ ಊರಿನವರು ಹಲವು ಬಾರಿ ತಿಳಿ ಹೇಳಿದ್ದರು. ಆದರೂ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಮಗ್ರ ತನಿಖೆ ನಡೆಸಿದ್ದರು. ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ವಯಸ್ಸಿನ ಒಟ್ಟು 14 ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಳ್ಳಲಾಗಿದ್ದು, ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕವೇ ಕ್ರಮ ಕೈಗೊಂಡಿದ್ದಾರೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ ತನ್ನ ಸೇವಾವಧಿಯನ್ನು ಹಲವು ಶಾಲೆಗಳಲ್ಲಿ ಪೂರೈಸಿದ್ದಾರೆ. ಪ್ರಸ್ತುತ ವರ್ಗಾವಣೆಗೊಂಡು ಬರಬೈಲು ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net