ಕಾರ್ಕಳ ಒಳಾಂಗಣ ಕ್ರೀಡಾಂಗಣಕ್ಕೆ 3.50 ಕೋಟಿ ರೂ. ಮಂಜೂರು: ಶಾಸಕ ವಿ.ಸುನೀಲ್ ಕುಮಾರ್

sunil kumar new
Published on

ಕಾರ್ಕಳ: ಹೊಸ ಹೊಸ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ದೃಷ್ಟಿಯಿಂದ ಕಾರ್ಕಳದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 3.50 ಕೋಟಿ ರೂ. ಮಂಜೂರು ಮಾಡಿದೆ ಎಂದು ಶಾಸಕ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ದೃಷ್ಟಿಯಿಂದ ಆರಂಭಿಸಿರುವ ಖೇಲೋ ಇಂಡಿಯಾ ಯೋಜನೆಯಡಿ ತನ್ನ ವಿನಂತಿ ಮೇರೆಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರೆಜಿಜು 3.50 ಕೋಟಿ ರೂ. ಅನುದಾನವನ್ನು ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಬಿಡುಗಡೆ ಮಾಡಿದ್ದಾರೆ. ಕ್ರೀಡಾಂಗಣ ತಾಲೂಕು ಕ್ರೀಡಾಂಗಣ ಜಾಗದಲ್ಲಿಯೇ ಅಸ್ತಿತ್ವಕ್ಕೆ ಬರಲಿದ್ದು ಕ್ರೀಡಾಪಟುಗಳಿಗೆ ಬೇಕಾದ ಸಕಲ ಮೂಲ ಸೌಕರ್ಯಗಳೊಂದಿಗೆ 4 ಶಟ್ಲ್ ಬ್ಯಾಡ್ಮಿಂಟನ್ ಕೋರ್ಟ್, ಜಿಮ್ನಾಷಿಯಂ ಕೋರ್ಟ್, ಟೇಬಲ್ ಟೆನಿಸ್ ಕೋರ್ಟ್‌ಗಳು ಹಾಗೂ ಇನ್ನಿತರೆ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲಕರ ಕಟ್ಟಡ ನಿರ್ಮಾಣ ಮಾಡಲಾಗುವುದು. ಕ್ರೀಡಾಂಗಣದ ರೂಪುರೇಷೆ ಸಿದ್ಧಪಡಿಸಿ ಅತೀ ಶೀಘ್ರ ಆಡಳಿತಾತ್ಮಕ ಅನುಮೋದನೆ ಪಡೆದು ಕ್ರೀಡಾಂಗಣ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net