5ರಂದು ಕಾರ್ನಾಡು ದೇವಳ ಸಮಾಲೋಚನಾ ಸಭೆ

Published on

ಮೂಲ್ಕಿ: ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಗ್ರಾಮಸ್ಥರ, ಸಂಘ ಸಂಸ್ಥೆಗಳು, ಸದಸ್ಯರ, ಸಮಿತಿ ಸದಸ್ಯರ ಸಮಾಲೋಚನಾ ಸಭೆ ಜ.5ರಂದು ಬೆಳಗ್ಗೆ 10.30ಕ್ಕೆ ಶ್ರೀ ವಿಷ್ಣುಮೂರ್ತಿ ದೇವಳದ ಸಭಾಭವನದಲ್ಲಿ ನಡೆಯಲಿದೆ.

ಫೆ 12ರಿಂದ 17ರವರೆಗೆ ನಡೆಯುವ ಶ್ರೀ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಲಿದೆ. ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಅಭಯಚಂದ್ರ ಜೈನ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಿದ್ದಾರೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net