ಆಗಸ್ಟ್ 11 ರಿಂದ ವಿಧಾನಸಭೆ ಮುಂಗಾರು ಅಧಿವೇಶನ

Screenshot_20250721_132722_Google
Published on

ವಿಜಯವಾಣಿ ಸುದ್ದಿಜಾಲ ಮಂಗಳೂರು

ಕರ್ನಾಟಕ ವಿಧಾನಸಭೆ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22 ತನಕ ನಡೆಯಲಿದೆ. ಪ್ರಥಮ ದಿನ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

ಅಗತ್ಯಬಿದ್ದರೆ ಅಧಿವೇಶನ ಅವಧಿ ವಿಸ್ತರಣೆ ಕುರಿತು ಸ್ಪೀಕರ್ ಅಧ್ಯಕ್ಷತೆಯಲ್ಲಿರುವ ಮತ್ತು ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರು ಒಳಗೊಂಡಿರುವ ಸಲಹಾ ಸಮಿತಿ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದು ಅವರು ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಧಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ಸರ್ಕಾರ ಈಗಾಗಲೇ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net