

ಮಂಗಳೂರು : ಕರ್ಣಾಟಕ ಬ್ಯಾಂಕ್ ತನ್ನ ಕೆಬಿಎಲ್-ಫಿನ್‌ಒನ್’ -ಫಿನ್‌ಟೆಕ್ ಗ್ರೋತ್ ಕಾರ್ಯಕ್ರಮದ ಎರಡನೇ ಆವೃತ್ತಿಯನ್ನು
ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್-2023 ರಲ್ಲಿ ಆಯೋಜಿಸಿತು. ದ ಫಿನ್‌ಟೆಕ್‌ಮೀಟ್ ಅಪ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಡಿಜಿಟಲ್ ಆರ್ಥಿಕ ವ್ಯವಸ್ಥೆಯ ಒಳಗೊಳ್ಳುವಿಕೆಯ ಸಾಧ್ಯತೆ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಸಿಇಓ ಶ್ರೀಕೃಷ್ಣನ್ ಎಚ್.ಮಾತನಾಡಿ ಕರ್ಣಾಟಕ ಬ್ಯಾಂಕ್ ಶತಮಾನೋತ್ಸವವನ್ನು ಆಚರಿಸುತ್ತಿದ್ದು, ಸ್ಟಾರ್ಟ್ ಅಪ್ ಎಟ್ 100 ಮೂಲಕ ಕರ್ನಾಟಕದ ಕರ್ಣಾಟಕ ಬ್ಯಾಂಕ್, ಭಾರತದ ಕರ್ಣಾಟಕ ಬ್ಯಾಂಕ್ ಆಗಿ ಬಲಿಷ್ಠವಾಗಿ ಹೊರಹೊಮ್ಮಲಿದೆ. ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ಬ್ಯಾಂಕಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್ ರಾವ್ ಮಾತನಾಡಿ ಕರ್ಣಾಟಕ ಬ್ಯಾಂಕ್ ಕೃಷಿ ಹಾಗೂ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಉದ್ಯಮಿಗಳಿಗೆ ಮೊದಲ ಆದ್ಯತೆ ನೀಡುತ್ತಿದ್ದು, ಗ್ರಾಹಕರ ಅವಶ್ಯಕತೆಗಳಿಗೆ ತಕ್ಕುದಾದ ಆರ್ಥಿಕ ಪ್ರಾಡಕ್ಟ್‌ಗಳನ್ನು ಪರಿಚಯಿಸುತ್ತಿದೆ ಎಂದರು. ಕರ್ಣಾಟಕ ಬ್ಯಾಂಕಿನ ಉನ್ನತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.