ಕರ್ಣಾಟಕ ಬ್ಯಾಂಕ್ ಸಾಲಿಗ್ರಾಮ ಶಾಖೆ ವಾರ್ಷಿಕೋತ್ಸವ

bank
Published on

ಕೋಟ: ಕರ್ಣಾಟಕ ಬ್ಯಾಂಕ್ ಚಿತ್ರಪಾಡಿ ಸಾಲಿಗ್ರಾಮ ಶಾಖೆ 53ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಬ್ಯಾಂಕ್‌ನಲ್ಲಿ ಜರುಗಿತು. ಸಾಲಿಗ್ರಾಮ ದೇವಸ್ಥಾನ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಪ್ರಾದೇಶಿಕ ಕಚೇರಿ ಎಜಿಎಂ ವಾದಿರಾಜ್ ಕೆ. ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಅವರನ್ನು ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಕರ್ಣಾಟಕ ಬ್ಯಾಂಕ್ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯ, ಅಘೋರೇಶ್ವರ ದೇಗುಲ ಅಧ್ಯಕ್ಷ ಚಂದ್ರಶೇಖರ ಕಾರಂತ, ಸ್ಥಳೀಯರಾದ ಚಂದ್ರಶೇಖರ ಸೋಮಯಾಜಿ, ಕರ್ಣಾಟಕ ಬ್ಯಾಂಕ್ ನಿವೃತ್ತ ಡಿಜಿಎಂ ಆನಂದರಾಮ ಅಡಿಗ, ಬೈಕಾಡಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು. ಬ್ಯಾಂಕ್ ವ್ಯವಸ್ಥಾಪಕ ಅವಿನಾಶ್ ಸ್ವಾಗತಿಸಿದರು. ಸಿಬ್ಬಂದಿ ರಶ್ಮಿ ವಂದಿಸಿದರು. ವಿನಯ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net