

ಬೆಂಗಳೂರು: ಮುಖ್ಯಮಂತ್ರಿಯಾಗಿ ಏಳನೇ ಮುಂಗಡಪತ್ರ ಮಂಡಿಸಿದ ಬಿ.ಎಸ್.ಯಡಿಯೂರಪ್ಪ ಅವರು ಈ ಸಲದ ಮುಂಗಡ ಪತ್ರದಲ್ಲಿ ರಾಜ್ಯದ ಕ್ರೈಸ್ತ ಸಮುದಾಯದವರ ಸರ್ವತೋಮುಖ ಏಳಿಗೆಗಾಗಿ 200 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ.
ಇದೇ ರೀತಿ, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.
ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿರುವ ಸರ್ಕಾರ, ಸರ್ಕಾರದ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು ಕ್ರಮ ತೆಗೆದುಕೊಳ್ಳುವುದಾಗಿ ಘೋಷಿಸಿದೆ.