

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಮುಂಜಾನೆ 4 ಗಂಟೆಯಿಂದ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿರುವ ಪೊಲೀಸರು, ರೌಡಿ ಶೀಟರ್ ಹಾಗೂ ಕಾವೇರಿ ಪಿಎಫ್ ಗಲಾಟೆಯಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿದ್ದಾರೆ.
180ಕ್ಕೂ ಹೆಚ್ಚು ರೌಡಿಶೀಟರ್ಗಳನ್ನು ಬಂಧಿಸಿದ್ದಾರೆ. ಬಂದ್ ನೆಪದಲ್ಲಿ ಕಾನೂನು ವ್ಯವಸ್ಥೆಗೆ ಅಡಚಣೆ ಮಾಡದಂತೆ ಖಡಕ್ ಎಚ್ಚರಿಕೆ ನೀಡಿದ ಪೊಲೀಸರು. ಉತ್ತರ ವಿಭಾಗದ ಪೊಲೀಸರಿಂದ ಪ್ರತಿಭಟನಾಕಾರರ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಇಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಬೆಂಗಳೂರಿನ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗೆ ಬಂದ್ ಬಿಸಿ ತಟ್ಟಿಲ್ಲ.
ಎಂದಿನಂತೆ ಸಂಚಾರ ನಡೆಸುತ್ತಿರುವ ಸಾರಿಗೆ ಸಂಸ್ಥೆಗಳು. ಹಾಗೆಯೇ ಜನರ ಓಡಾಟದಲ್ಲಿ ಕೊಂಚ ವಿರಳವಾಗಿದೆ. ಸಹಜ ಸ್ಥಿತಿಯಲ್ಲಿ ಬೆಂಗಳೂರಿನ ಬಸ್ಗಳು ಸಂಚಾರ ನಡೆಸುತ್ತಿವೆ.