ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ : ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ

Administrative Building of Central University of Karnataka, Kala
KALABURAGI ( GULBARGA ) KARNATAKA , FEBRUARY 15 , 2020 : Administrative Building of Central University of Karnataka, Kalaburagi.
Published on

ಮೈಸೂರು: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಶುರುವಾಗಿದೆ.

ಈ ಭಾಗದ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ವಿವಿ ಜೀವವಿಜ್ಞಾನ ವಿಭಾಗದ ಡೀನ್ ಪ್ರೊ.ಎನ್.ಸತ್ಯನಾರಾಯಣ ಹೇಳಿದರು.


ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ವತಿಯಿಂದ ದೇಶದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯನ್ನು(ಸಿಯುಇಟಿ) ನಡೆಸಲಾಗುತ್ತದೆ. ಅಂತೆಯೇ ನಮ್ಮ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾ.26 ಕೊನೇ ದಿನವಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ಈಗಾಗಲೇ ನೋಂದಣಿ ಆರಂಭವಾಗಿದೆ. ಬಿ.ಟೆಕ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಬಿಎಸ್ಸಿ ಭೌತಶಾಸ್ತ್ರ, ಬಿಎಸ್ಸಿ ಭೂಗೋಳಶಾಸ್ತ್ರ, ಬಿಎಸ್ಸಿ ಭೂವಿಜ್ಞಾನ ಮೊದಲಾದ 14 ಕೋರ್ಸ್‌ಗಳು ಲಭ್ಯ ಇವೆ ಎಂದು ತಿಳಿಸಿದರು.


ಮೈಸೂರಿನಲ್ಲೂ ಪ್ರವೇಶ ಪರೀಕ್ಷೆ ನಡೆಯುತ್ತಿದೆ. ಇದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಅಡಿಯಲ್ಲಿನ ಸಂಸ್ಥೆಯಾದರೂ ಇದರ ಬಗ್ಗೆ ಹಲವರಿಗೆ ಮಾಹಿತಿ ಇಲ್ಲ. ಈ ಭಾಗದ ಅರ್ಹರು ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ. 011-40759000 ಅಥವಾ 011-69227700 ಸಂಪರ್ಕಿಸಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net