

ಬಂಟ್ವಾಳ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ ಇದರ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ವಕೀಲ ರವೀಂದ್ರ ಕುಕ್ಕಾಜೆ ಆಯ್ಕೆಯಾಗಿದ್ದಾರೆ ಎಂದು ಕ.ಚು.ಸಾ.ಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಕಟಿಸಿದ್ದಾರೆ.
ಕುಕ್ಕಾಜೆ ಅವರು ಕಾನೂನು ಪದವಿ ಪಡೆದ ಬಳಿಕ ಕಳೆದ 20 ವರ್ಷಗಳಿಂದ ಬೆಂಗಳೂರು, ಮಂಗಳೂರು, ಬಂಟ್ವಾಳದಲ್ಲಿ ವಕೀಲಿ ವೃತ್ತಿ ಮಾಡುತ್ತಿದ್ದಾರೆ. ಬಂಟ್ವಾಳ ತಾಲೂಕು ಕ.ಸಾ.ಪ. ಗೌರವ ಕಾರ್ಯದರ್ಶಿಯಾಗಿ ವಿವಿಧ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಟ್ವಾಳ ಸೀನಿಯರ್ ಛೇಂಬರ್ ಘಟಕದ ಉಪಾಧ್ಯಕ್ಷರಾಗಿದ್ದು, ಹಲವಾರು ಕವಿಗೋಷ್ಠಿ, ವಿಚಾರ ಗೋಷ್ಠಿಗಳಲ್ಲಿ ತರಬೇತಿ ಶಿಬಿರಗಳನ್ನು ನಡೆಸಿಕೊಡುತ್ತಿದ್ದಾರೆ.