ಮಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

IMG-20210812-WA0003
Published on

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಗುರುವಾರ ಬಜಪೆ ಅಂತರಾಷ್ಟ್ರೀಯ ಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್,
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸುಧಾಕರ್, ಶಾಸಕರಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜ, ಸಂಜೀವ ಮಠಂದೂರು, ಸೇರಿದಂತೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net