ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ; ರಾಜೇಂದ್ರ ಜಲ್ದಾರ್

Karnataka Darshan,Tour Program, RAICHUR,
Karnataka Darshan,Tour Program, RAICHUR,
Published on

ರಾಯಚೂರು ನಾಡಿನ ಕಲೆ, ಸಂಸ್ಕೃತಿ, ವಾಸ್ತುಶಿಲ್ಪ, ಪರಂಪರೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ್ ಅವರು ಹೇಳಿದರು.

ನಗರದ ಕ್ರೀಡಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಸೋಮವಾರ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ದೇಶ ಸುತ್ತು ಕೋಶ ಓದು ಎನ್ನುವ ಮಾತಿನಂತೆ ಇಂದಿನ ವಿದ್ಯಾರ್ಥಿಗಳಿಗೆ ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳನ್ನು ಪರಿಚಯಿಸುವುದು ಮುಖ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ತಾವು ಭೇಟಿ ನೀಡುವ ಸ್ಥಳಗಳ ಮಹತ್ವ, ಅಲ್ಲಿನ ಐತಿಹ್ಯ ತಿಳಿದುಕೊಂಡು, ತಮಗಾದ ಪ್ರವಾಸ ಅನುಭವವನ್ನು ಇತರರಿಗೆ ತಿಳಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಓದಿಗೆ ಮಹತ್ವ ನೀಡಬೇಕು ಎಂದರು.

ಶಾಲಾ ಮಕ್ಕಳೊಂದಿಗೆ ಪ್ರವಾಸ ಕುರಿತು ಕುಶಲೋಪರಿ ವಿಚಾರಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಕೃಷ್ಣಾ ಅವರು ವಿದ್ಯಾರ್ಥಿಗಳ ಪ್ರವಾಸಕ್ಕೆ ಶುಭ ಕೋರಿದರು. ಕರ್ನಾಟಕ ದರ್ಶನ ಅಂಗವಾಗಿ ಪ್ರಸಕ್ತ ೨೦೨೪-೨೫ನೇ ಸಾಲಿಗೆ ಜಿಲ್ಲೆಯ ೮ನೇ ತರಗತಿಯ ೭೨೮ ಶಾಲಾ ಮಕ್ಕಳು ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರತಿ ತಾಲೂಕಿಗೆ ೩ ಬಸ್‌ಗಳ ವ್ಯವಸ್ಥೆ ಮಾಡಿದ್ದು, ಪ್ರಯಾಣದ ಸಂದರ್ಭದಲ್ಲಿ ವಸತಿ, ಊಟೋಪಚಾರಕ್ಕೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಭಾಗೀಯ ಅಽಕಾರಿ ಚಂದ್ರಶೇಖರ ಭಂಡಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ ನಾಯಕ ಸೇರಿದಂತೆ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಶಿಕ್ಷಣ ಇಲಾಖೆಯ ಅಽಕಾರಿ, ಸಿಬ್ಬಂದಿಗಳು ಇದ್ದರು. --------------

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net