ಸರ್ ಎಂ ವಿಶ್ವೇಶ್ವರಯ್ಯ ರೈಲ್ವೇ ಟರ್ಮಿನಲ್​ಗೆ ಭೇಟಿ ನೀಡಿ ಪರಿಶೀಲಿಸಿದ ರಾಜ್ಯಪಾಲರು…

Sir MV Terminal
Published on

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಬೆಂಗಳೂರು ರೈಲು ನಿಲ್ದಾಣದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಭೇಟಿ ನೀಡಿದರು.

ರೈಲ್ವೇ ಟರ್ಮಿನಲ್‌ಗೆ ಭೇಟಿ ನೀಡಿದ ರಾಜ್ಯಪಾಲರು, ಸರ್.ಎಂ ವಿಶ್ವೇಶ್ವರಯ್ಯರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಟರ್ಮಿನಲ್ ಮುಂಭಾಗದಲ್ಲಿ ಸಸಿ ನೆಟ್ಟರು. ನಂತರ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಿದ್ದಾರೆ.

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯವಸ್ಥಾಪಕ ಶ್ಯಾಮ್ ಸಿಂಗ್, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿರ್ವಹಣೆಯ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದರು. ರೈಲ್ವೇ ಪೊಲೀಸ್​ ಫೋರ್ಸ್​​ನ ಎಸ್‌ಪಿ ದೇವಾಂಶು ಶುಕ್ಲಾ, ಹಿರಿಯ ವಾಣಿಜ್ಯ ವ್ಯವಸ್ಥಾಪಕ ಕೃಷ್ಣಾ ರೆಡ್ಡಿ, ಹಿರಿಯ ಎಲೆಕ್ಟ್ರಿಕಲ್ ಇಂಜಿನಿಯರ್‌ ದೇವಪರ್ ಮತ್ತು ಸತ್ಯಜಿತ್ ಹರ್ನಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net