ಕರ್ನಾಟಕ ರಾಜ್ಯಪಾಲರು ಬಿಜೆಪಿಯ ಕೈಗೊಂಬೆ

03Kush01
ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾನವ ಸರಪಳಿ ರಚಿಸಿದರು. ವಿ.ಪಿ.ಶಶಿಧರ್, ಚಂದನ್ ಕುಮಾರ್, ಅಬ್ದುಲ್ ರಜಾಕ್, ನಟೇಶ್ ಗೌಡ ಇತರರು ಇದ್ದರು.
Published on

ಕುಶಾಲನಗರ: ದೇಶದಲ್ಲಿ ಬಿಜೆಪಿಯೇತರ ಪಕ್ಷಗಳು ಆಡಳಿತ ನಡೆಸುವ ಕಡೆಗಳಲ್ಲಿ ಪಿತೂರಿ ಮಾಡಿ ಅಧಿಕಾರಕ್ಕೆ ಬರುವುದನ್ನು ನಿಲ್ಲಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಆಗ್ರಹಿಸಿದರು.

ಕುಶಾಲನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ನೂರಾರು ಕಾರ್ಯಕರ್ತರು ಶನಿವಾರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಲಾಯಿತು. ಇದೇ ವೇಳೆ ಕರ್ನಾಟಕದ ರಾಜ್ಯಪಾಲರು ಬಿಜೆಪಿಯ ಕೈಗೊಂಬೆ ಆಗಿದ್ದಾರೆ ಎಂದು ಅವರ ವಿರುದ್ಧ ಧಿಕ್ಕಾರ ಕೂಗಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ನಡವಳಿಕೆ ಬಗ್ಗೆಯೂ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಾರಿ ಮಳೆಯನ್ನೂ ಲೆಕ್ಕಿಸದೆ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಕುಶಾಲನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ಹೆಬ್ಬಾಲೆ ಶೇಖರ್, ಪ್ರದೀಪ್ ರೆಡ್ಡಿ, ಎಸ್.ಎನ್. ರಾಜೇಂದ್ರ, ಫಿಲೋಮಿನಾ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net