ಕರ್ನಾಟಕ ಕಾವಲು ಪಡೆಯಿಂದ ಅರೆಬೆತ್ತಲೆ ಧರಣಿ

29Kush01
Published on

ಕುಶಾಲನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆಯ ಕಾರ್ಯಕರ್ತರು ಕೊಡಗು-ಮೈಸೂರು ಚೆಕ್‌ಪೋಸ್ಟ್ ಬಳಿ ಶುಕ್ರವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮಾತನಾಡಿ, ರಾಜ್ಯದ ರೈತರ ಹಿತ ಕಾಪಾಡಬೇಕಾದ ಸಂಸದರು ಹಾಗೂ ರಾಜ್ಯ ಸರ್ಕಾರ ತಮಿಳುನಾಡು ಬಗ್ಗೆ ಚಿಂತಿಸುತ್ತಿದೆ. ಇಲ್ಲಿನ ರೈತರ ಬಗ್ಗೆ ಕಾಳಜಿ ಹೊಂದಿದಂತೆ ಕಾಣುತ್ತಿಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಸುಬ್ರಮಣಿ ಮಾತನಾಡಿ, ಸಂಸದರು ರಾಜ್ಯದ ಪರ ನಿಲ್ಲಬೇಕು ಎಂದು ಆಗ್ರಹಿಸಿದರು. ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಕಾವಲು ಪಡೆಯ ಜಿಲ್ಲಾ ಕಾರ್ಯದರ್ಶಿ ಸುರೇಶ್, ಯುವ ಘಟಕದ ಅಧ್ಯಕ್ಷ ಅಭಿಲಾಷ್, ಮುಖಂಡ ಅಬ್ದುಲ್ ಅಜೀಜ್, ಸಹ ಕಾರ್ಯದರ್ಶಿ ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net