ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ. ಹಿ.ಚಿ. ಬೋರಲಿಂಗಯ್ಯ

Janapada parshath
Published on

ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಪ್ರೊ. ಹಿ.ಚಿ. ಬೋರಲಿಂಗಯ್ಯ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ಪ್ರೊ. ಹಿ.ಶಿ. ರಾಮಚಂದ್ರೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಹಿ.ಚಿ.ಬೋರಲಿಂಗಯ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ವ್ಯವಸ್ಥಾಪಕ ಟ್ರಸ್ಟಿ ಆದಿತ್ಯ ನಂಜರಾಜ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net