ಪರಿಷತ್ ಸಭಾಪತಿ ಪ್ರತಾಪ್​ಚಂದ್ರ ಶೆಟ್ಟಿ ವಿರುದ್ಧ ಜೆಡಿಎಸ್​ನಿಂದಲೂ ಅವಿಶ್ವಾಸ ನಿರ್ಣಯ ಮಂಡನೆ

congress-jds-1526882071
Published on

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಜೆಡಿಎಸ್​ನ 11 ಮಂದಿ ಸದಸ್ಯರು ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಮಯಗಳು 165ರ ಅಡಿಯಲ್ಲಿ ಈ ಸೂಚನೆ ನೀಡಲಾಗಿದೆ.

ಸಭಾಪತಿಗಳು ಪರಿಷತ್ತಿನ ಕಲಾಪಗಳನ್ನು ಮತ್ತು ನಡವಳಿಗಳನ್ನು ಪಕ್ಷಾತೀತವಾಗಿ ನಿರ್ವಹಿಸದೇ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವುದಾಗಿ ಜೆಡಿಎಸ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ, ರಮೇಶ್ ಗೌಡ, ಬಿಎಂಎಲ್ ಕಾಂತರಾಜ್, ಗೋವಿಂದರಾಜು, ಬಿ.ಎಂ.ಫಾರೂಕ್ ಸೇರಿದಂತೆ 11 ಮಂದಿ ಸದಸ್ಯರು ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದಾರೆ.

ಜೆಡಿಎಸ್ ಬೆಂಬಲ: ಮೇಲ್ಮನೆ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸಲಿದೆ. ಸದನದಲ್ಲಿ ಪ್ರಸ್ತಾಪವಾಗುವ ವಿಷಯಗಳಿಗೆ ವಿಷಯಾಧಾರಿತವಾಗಿ ಬೆಂಬಲ ನೀಡಬೇಕಾಗುತ್ತದೆ. ಹಾಗಾಗಿ ನಾವು ಈ ವಿಷಯದಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಸದನದ ಒಳಗಿನ ವಿಚಾರವೇ ಬೇರೆ, ಹೊರಗಿನ ವಿಚಾರವೇ ಬೇರೆ. ಬಿಜೆಪಿಗೆ ಬೆಂಬಲ ನೀಡುವ ವಿಚಾರದ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ನಾವು ಈ ವಿಚಾರದಲ್ಲಿ ಬೆಂಬಲ ನೀಡಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net