ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಎಇಇ

lokayukta
Published on

ಬೆಂಗಳೂರು: ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬೆಸ್ಕಾಂ ಎಇಇ ಯನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಸ್ಕಾಂ ಎಇಇ ನವೀನ ಲೋಕಾಯುಕ್ತ ಬಲೆಗೆ ಬಿದ್ದವರು. 80 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ನವೀನ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ನಾಗರಬಾವಿ ವ್ಯಾಪ್ತಿಯ ತಣಿಸಂದ್ರ ಚೆಸ್ಕಾಂ ಕಚೇರಿಯ ಎಇಇ ಆಗಿರುವ ನವೀನ್ 80 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಥಣಿಸಂದ್ರದ ಕಾರ್ಯಪಾಲನೆ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನವೀನ್ ಕುಮಾರ್, ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಲು ಚಂದನ್ ಕುಮಾರ್ ಎಂಬುವವರಿಂದ 80 ಸಾವಿರ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net